ಅಳುಕು..











ಇಂದು ಸಂಜೆ ಏನೋ ಅಳುಕು ಮನದಲ್ಲಿ.. ಏನು ಅಂತ ಗೊತ್ತಿಲ್ಲ.. ಅರ್ಥಾನೂ ಆಗ್ತಿಲ್ಲ.. ಯಾವುದೋ ನೋವಿನ ಎಳೆ.. ಏನೋ ತಳಮಳ..
ಕತ್ತಲಲ್ಲಿ ಏನೋ ತಡಕಾಡುತ್ತಿರೋ ಅನುಭವ..ಒಂದೊಂದು ಸಲ ಬದುಕೇ ಕತ್ತಲಲ್ಲಿ ಗೊತ್ತಿರದ ವಸ್ತುವಿಗಾಗಿ ತಡಕಾಡುವುದೇನೊ ಅನ್ನೋ ಭಾವನೆ.. :) ಈ ಮನಸು, ಅದರ ಅಸ್ತಿತ್ವ ಅದರ ಆಳ.. ಅದರ ನಿರೀಕ್ಷೆ.. ಅದರ ತಳಮಳ ಎಲ್ಲ ನೋಡಿದರೆ.. ನನಗೆ ನಾನೇ ಅಪರಿಚಿತಳು ಅನಿಸುತ್ತೆ..ಅಂಥದರಲ್ಲಿ ಇನ್ನೊಂದು ಮನಸು ನನ್ನನ್ನು ಅರ್ಥ ಮಾಡಿಕೊಳ್ಳಲಿ ಅನ್ನುತ್ತೆ ಈ ಮುಗ್ಢ ಮೂರ್ಖ ಮನಸು..ಎಷ್ಟು ಗೊಂದಲಮಯ ಅಲ್ವಾ?? :)

ದಿನದ ರಭಸದ ಜಂಜಾಟಗಳಲಿ.. ಹೊರ-ಪ್ರಪಂಚದ ಸೊಗಸು ಸವಿಯುವ ಗದ್ದಲದಲ್ಲಿ.. ದಿನ-ನಿತ್ಯದ ಕೆಲಸದ ಭರಾಟೆಯಲ್ಲಿ.. ಮೆಲ್ಲನೆ ಇಣುಕಿ ನೋಡುತ್ತೆ ಮನ.. ಇದ್ದರೂ ಇಲ್ಲದಂತಿರೋ ಇದು.. ಒಂದೊದು ಸಲ ಇಲ್ಲದ ತಲ್ಲಣ ಹುಟ್ಟಿಸುತ್ತೆ..
ಮನಸು ಅನ್ನೊದೇ ಇಲ್ಲ್ದಿದ್ರೆ..?! ಅದರಿಂದಾಗೋ ಪ್ರಯೋಜನಗಳು ಮತ್ತು ಹಾನಿಗಳ ಬಗ್ಗೆನೇ ಪುಟಗಟ್ಟಲೇ ಬರೀಬಹುದೇನೋ.. ಈ ಮನಸು ಮತ್ತೆ ಬುಧ್ಧಿ ಒಟ್ಟಿಗೆ ಕೆಲಸ ಮಾಡೊ ರೀತಿ ಮಾತ್ರ ನನಗೆ ಅಚ್ಚರಿ ಹುಟ್ಟಿಸುತ್ತೆ.. ಒಂದು ಸಲ ಮನಸಿಗೆ ಬುದ್ಧಿ ಇಷ್ಟ ಆಗಲ್ಲ ಇನ್ನೊಂದು ಸಲ ಬುದ್ಧಿಗೆ ಮನಸು ಇಷ್ಟ ಆಗಲ್ಲ.. ಮತ್ತೊಮ್ಮೆ ಎರಡೂ ಗೆಳೆಯರು.. ಈಗ ಬರೀತಿದಿನಲ್ಲ.. ಇದು ಮನಸು ಅನ್ಲಾ? ಅಥವ ಬುದ್ಧಿ ನಾ?

ಮನಸೆ ಓ ಮನಸೆ ಎಂಥಾ ಮನಸೆ..ಮನಸೆ ಒಳ ಮನಸೆ.. ಕೇಳಿದೀರ ಈ ಹಾಡು..? :)

ಏನೇ ಇರಲಿ ಮನಸಿಗೆ ಅನಿಸಿದ್ದನ್ನು ವ್ಯಕ್ತ ಪಡಿಸೋಕೆ ಇರೋ ಈ ಮುದ್ದಾದ ಭಾಷೆಗೆ.. ಈ ಹಾಳೆಗೆ.. ಈ ಲೇಖನಿಗೆ ನಾನು ಚಿರ-ಋಣಿ.. ಇವಿರಲಿಲ್ಲ ಅಂದರೆ.. ನನ್ನ ಆಂತರಿಕ ಬದುಕನ್ನು ಊಹಿಸಿಕೊಳ್ಳೋದೇ ಅಸಾಧ್ಯ...

Comments

tangaali said…
manassu markaTa antaare jana! adirali haage summane biTbiDi.. Adare.. nimma manassu maatra hoovinantahudu anta I lekanadinda gottaagutte. nimma manassannu adara paaDige biTbiDi.. adu hEge hogutto hogli.. hucchu kudure tara.. adare buddi maatra swalpa churukaagirli.. hoDo manasanna ididu kattakokke.. enantIra?

chennagide nimma lEKana.
Manjula said…
dhanyavada.. ashtu matra heLaballe..
Manjula said…
ನಿಮ್ಮ ಕಾಮೆಂಟ್ ನಿಮ್ಮ ಮನಸಿನಿಂದ ಬಂದಂತಿದೆ.. ಧನ್ಯವಾದಗಳು.. :)
tangaali said…
This comment has been removed by the author.
tangaali said…
ನಿಮ್ಮ ಲೇಖನಗಳನ್ನ ಒದೋದು ಒಂದು ಹವ್ಯಾಸ ಆಗಿದೆ ನನ್ಗೆ. ಹಾಗೆ ಒದುತ್ತ ಇದ್ದರೆ, ನೆನಪುಗಳಿಗೆಲ್ಲ ರೆಕ್ಕೆ ಪುಕ್ಕ ಬಂದು ಹಾರುಡುತ್ವೆ :)

Popular Posts